’75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಶ್ರೀ ಲಕ್ಷ್ಮೀನಾರಾಯಣ ರಾವ್ ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಧ್ವಜವಂದನೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

